Thursday, May 9, 2024

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರು ಯುಗಾದಿ ಹಬ್ಬದ ಅಂಗವಾಗಿ ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.

ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭಾಶಯಗಳು ಎಂದು ಹೇಳಿದ್ದಾರೆ.

ಎಲ್ಲರಿಗೂ ಯುಗಾದಿಯ ಶುಭಾಶಯಗಳು. ನಾನು ಎಲ್ಲರಿಗೂ ಅಪರಿಮಿತ ಸಂತೋಷ ಮತ್ತು ಸಮೇದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದುವಿಷಯದಲ್ಲೂ ನಿಮಗೆ ಸಂತೋಷವನ್ನು ತರಲಿ ಎಂದು ಎಕ್ಸ್​ ಖಾತೆಯಲ್ಲಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಅಮಿತ್​ ಶಾ ಶುಭಾಶಯ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸಹ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ನನ್ನ ಎಲ್ಲಾ ಸಹೋದರ-ಸಹೋದರಿಯರಿಗೆ ಹೊಸ ವರ್ಷದ ಶುಭಕಾಮನೆಗಳು. ಸಂತೋಷದ ಈ ಸಂದರ್ಭದಲ್ಲಿ ಹಬ್ಬದ ಸ್ಫೂರ್ತಿ ಮತ್ತು ಸೊಬಗು ಸದಾ ನಿಮ್ಮ ಜೊತೆಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES