Sunday, May 5, 2024

ಕಾರು ಅಪಘಾತ : ಮೃತ ಪ್ರಕಾಶ್ ಅಂತ್ಯಕ್ರಿಯೆಯಲ್ಲಿ ಶೋಭಾ ಕರಂದ್ಲಾಜೆ ಭಾಗಿ

ಬೆಂಗಳೂರು : ಕಾರು ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾಗಿಯಾಗಿ, ಅಂತಿಮ ನಮನ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಪ್ರಕಾಶ್ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಬರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿದರು.

ಪ್ರಕಾಶ್ ಅವರು ನಿಷ್ಠಾವಂತ ಕಾರ್ಯಕರ್ತ. ಅವರ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ. ಹಬ್ಬದ ದಿನ ನಮ್ಮ ಮನಸಲ್ಲಿ ಹಬ್ಬದ ವಾತಾವರಣ ಇಲ್ಲ. ಬೈಕ್ ನಲ್ಲಿ ನಮ್ಮದೇ ಕಾರ್ಯಕ್ರಮ ಕ್ಕೆ ಬರುವಾಗ ಅಪಘಾತ ಸಂಭವಿಸಿದೆ. ಅವರ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ತಿಳಿಸಿದರು.

ಕೆಆರ್ ಪುರದಲ್ಲಿ ನಿನ್ನೆ ನಡೆದಿದ್ದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಪ್ರಕಾಶ್ ನಿಧನರಾಗಿದ್ದರು. ಶೋಭಾ ಕರಂದ್ಲಾಜೆ ಅವರ ಚುನಾವಣಾ ಪ್ರಚಾರ ವೇಳೆ ಅಪಘಾತದಿಂದ ಸಾವನ್ನಪ್ಪಿದ್ದರು. ಇಂದು ಟಿ.ಸಿ ಪಾಳ್ಯದ ಚರ್ಚ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಶೋಭಾ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

RELATED ARTICLES

Related Articles

TRENDING ARTICLES