Thursday, May 9, 2024

ಕುಮಾರಸ್ವಾಮಿ ಮಠದ ಸ್ವಾಮೀಜಿಗಳನ್ನೂ ಬಿಟ್ಟಿಲ್ಲ : ಡಿ.ಕೆ. ಶಿವಕುಮಾರ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯದ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಠದ ಸ್ವಾಮೀಜಿಗಳನ್ನೂ ಬಿಟ್ಟಿಲ್ಲ ಎಂದು ಕುಟುಕಿದ್ದಾರೆ.

ಹೆಚ್​ಡಿಕೆ ಎರಡು ಮಠ ಮಾಡಿದ್ದಾರೆ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ. ಈಗ ದಿನ ಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡ್ತಾರೆ. ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ. ಹೀಗಾಗಿ, ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಚಾಟಿ ಬೀಸಿದರು.

ಶ್ರೀಗಳು ಯಾರ ಪರವೂ ಅಲ್ಲ ಎಂದಿದ್ದಾರೆ. ಮಠಕ್ಕೆ ಬಂದ ಪ್ರತಿಯೊಬ್ಬರಿಗೂ ವಿಭೂತಿ ಇಟ್ಟು ಆಶೀರ್ವದಿಸಿ ಕಳುಹಿಸುತ್ತಾರೆ. ಬಿಜೆಪಿಗರ ನಾಟಕವನ್ನು ಜನ ನೋಡುತ್ತಿದ್ದಾರೆ. ನಮ್ಮ ಸಮಾಜದ ಜನರು ಏನ್ ಗಮನಿಸಬೇಕೋ ಅದನ್ನ ಗಮನಿಸ್ತಿದ್ದಾರೆ. ಇದೇ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಬಿಜೆಪಿಯವರೇ ಇಳಿಸಿದ್ರು. ಈಗ ಅವರ ಜೊತೆಗೇ ಆಶೀರ್ವಾದ ಪಡೆಯಲು ಹೋಗಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯಕ್ಕೂ, ಧರ್ಮಕ್ಕೂ ಏನು ಸಂಬಂಧ?

ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೂ, ಧರ್ಮಕ್ಕೂ ಏನು ಸಂಬಂಧ? ಸ್ವಾಮೀಜಿಯವರನ್ನು ಏಕೆ ರಾಜಕೀಯಕ್ಕೆ ಬಳಸಿಕೊಳ್ಳಬೇಕು. ಶ್ರೀಗಳನ್ನು ಭೇಟಿ ಮಾಡಿ ಅವರನ್ನು ಬಳಸಿಕೊಳ್ಳುವ ಪ್ರಯತ್ನ ಕಾಂಗ್ರೆಸ್ ಮಾಡಿದೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಇವರು ಯಾವ ಜಾತ್ಯತೀತರು? ಅಧಿಕಾರದಲ್ಲಿದ್ದಾಗ ನಾನು ನಮ್ಮ ಸ್ವಾಮೀಜಿ ಅವರನ್ನು ಎಂದೂ ದುರುಪಯೋಗ ಪಡಿಸಿಕೊಳ್ಳವ ಕೆಲಸ ಮಾಡಿಲ್ಲ. ಜಾತ್ಯತೀತರು ಎಂದು ಹೇಳುವ ಕಾಂಗ್ರೆಸ್​ನವರು ನಿತ್ಯ ಜಾತಿ ಬಗ್ಗೆ ಮಾತನಾಡುತ್ತಾರೆ. ಜನರು ದಡ್ಡರಲ್ಲ, ಸ್ವಾಮೀಜಿ ಅವರನ್ನು ರಾಜಕೀಯಕ್ಕೆ ಬಳಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

Related Articles

TRENDING ARTICLES