Friday, May 17, 2024

‘ನಾವು ಕುರುಡರಲ್ಲ’.. ಬಾಬಾ ರಾಮದೇವ್​ಗೆ ಸುಪ್ರೀಂಕೋರ್ಟ್ ತರಾಟೆ

ಬೆಂಗಳೂರು : ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್‌ಗೆ ಸುಪ್ರೀಂ ಕೋರ್ಟ್ ಮತ್ತೊಂದು ಶಾಕ್ ನೀಡಿದೆ.

ರಾಮದೇವ್ ಸಲ್ಲಿಸಿದ್ದ ‘ಭೇಷರತ್ ಕ್ಷಮೆ’ಯನ್ನು ತಿರಸ್ಕರಿಸಿ ಕೇಂದ್ರ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದೆ. ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಾವೇನೂ ಕುರುಡರಲ್ಲ. ಈ ಪ್ರಕರಣದಲ್ಲಿ ಉದಾರವಾಗಿರಲು ನಾವು ಬಯಸುವುದಿಲ್ಲ ಎಂದು ಹೇಳಿ ಕ್ಷಮೆಯನ್ನು ತಿರಸ್ಕರಿಸಿದೆ.

ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಉತ್ತರದಿಂದಲೂ ಸರ್ವೋಚ್ಛ ನ್ಯಾಯಾಲಯ ತೃಪ್ತವಾಗಿಲ್ಲ ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕ್ಷಮಾಪಣೆಯು ಕಾಗದದ ಮೇಲಿದೆ. ಅವರ ಬೆನ್ನು ಗೋಡೆಗೆ ವಿರುದ್ಧವಾಗಿದೆ. ನಾವು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತೇವೆ, ನಾವು ಇದನ್ನು ಉದ್ದೇಶಪೂರ್ವಕ ಉಲ್ಲಂಘನೆ ಎಂದು ಪರಿಗಣಿಸುತ್ತೇವೆ ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠ ಹೇಳಿದೆ.

RELATED ARTICLES

Related Articles

TRENDING ARTICLES