Saturday, May 4, 2024

KSRTC ಮತ್ತು ಓಮಿನಿ ನಡುವೆ ಭೀಕರ ಅಪಘಾತ: ಮೂವರ ಸಾವು

ದಾವಣಗೆರೆ/ಶಿವಮೊಗ್ಗ : ಕೆಎಸ್​ಆರ್​ಟಿಸಿ ಮತ್ತು ಓಮಿನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದಾರುಣ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಶಿವಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಶಿವಮೊಗ್ಗದ ಹರಮಘಟ್ಟ ಗ್ರಾಮದ ನಿವಾಸಿಗಳಾದ ನಂಜುಂಡಪ್ಪ (83) , ರಾಕೇಶ್ (27) ​, ದೇವರಾಜ್ (30) ಮೃತ ದುರ್ದೈವಿಗಳು, ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ : ಯುಗಾದಿ ಹಬ್ಬದಂದು ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!

ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದರು. ಇನ್ನೂ ಬಸ್ಸಿನ ಮುಂಭಾಗವು ಛಿದ್ರಗೊಂಡಿತ್ತು

ಘಟನಾ ಸ್ಥಳಕ್ಕೆ ನ್ಯಾಮತಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES