Friday, May 10, 2024

ಅನುಮತಿ ಇಲ್ಲದೇ ಮದುವೆ ಶುಭಸಮಾರಂಭಗಳಿಗೆ ಬರುವ ಮಂಗಳಮುಖಿಯರಿಗೆ ನಿಷೇಧ!

ಪುಣೆ: ಟ್ರಾಫಿಕ್‌  ಸಿಗ್ನಲ್​ಗಳಲ್ಲಿ ಮಂಗಳಮುಖಿಯರು ಹಣಕ್ಕೆ ಬೇಡಿಕೆ ಇಟ್ಟು ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಅಷ್ಟೆ ಅಲ್ಲದೇ ಶುಭ ಸಮಾರಂಭಗಳಿಗೆ ಭೇಟಿ ನೀಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್ ಮಾಡಿದ್ದಾರೆ.

ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಅವರು ಟ್ರಾಫಿಕ್ ಜಂಕ್ಷನ್‌ಗಳಲ್ಲಿ ತೃತೀಯಲಿಂಗಿಗಳು. ಜಮಾಯಿಸಿ, ಪ್ರಯಾಣಿಕರಿಂದ ಬಲವಂತವಾಗಿ ಹಣಕ್ಕಾಗಿ ಒತ್ತಾಯಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಪೊಲೀಸರು ಸ್ವೀಕರಿಸಿದ ಹಲವಾರು ದೂರುಗಳಿಗೆ ಪ್ರತಿಕ್ರಿಯೆಯಾಗಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅಮಿತೇಶ್ ಕುಮಾ‌ರ್ ಹೇಳಿದ್ದಾರೆ.

ನಾವು ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ತೃತೀಯಲಿಂಗಿ ವ್ಯಕ್ತಿಗಳು ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಜಮಾಯಿಸುವುದನ್ನು ಮತ್ತು ವಾಹನ ಚಾಲಕರು ಹಾಗೂ ಪ್ರಯಾಣಿಕರಿಂದ ಬಲವಂತವಾಗಿ ಹಣಕ್ಕಾಗಿ ಒತ್ತಾಯಿಸುವುದನ್ನು ನಿಷೇಧಿಸಿದ್ದೇವೆ. ಇದಲ್ಲದೆ, ತೃತೀಯ ಲಿಂಗಿಗಳು ಹಬ್ಬಗಳು, ಜನನ ಮತ್ತು ಸಾವಿನ ಸಮಯದಲ್ಲಿ ಮನೆ ಮತ್ತು ಸಂಸ್ಥೆಗಳಿಗೆ ಭೇಟಿ ನೀಡುವುದನ್ನು ಗಮನಿಸಿದ್ದೇವೆ. ಈ ವೇಳೆ ಸ್ವಯಂಪ್ರೇರಣೆಯಿಂದ ನೀಡುವ ಹಣಕ್ಕಿಂತ ಹೆಚ್ಚಿನ ಹಣವನ್ನು ಬಲವಂತವಾಗಿ ಪಡೆಯುತ್ತಿದ್ದಾರೆ. ಆದರೆ, ಆಹ್ವಾನವಿಲ್ಲದೆ ಮನೆಗಳಿಗೆ ಭೇಟಿ ನೀಡುವುದನ್ನು ಈ ಆದೇಶದ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಆದೇಶವನ್ನು ಉಲ್ಲಂಘಿಸಿದ್ದೇ ಆದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರು ), 143, 144, 147, 159, 268, 384, 385, 503, 504, 506, ಪೊಲೀಸ್ ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಮಿತೇಶ್ ಕುಮಾ‌ರ್ ಹೇಳಿದ್ದಾರೆ.

ಅಮಿತೇಶ್ ಕುಮಾರ್ ಅವರು ಕಳೆದ ವರ್ಷ ನಾಗುರದಲ್ಲಿ ಪೊಲೀಸ್ ಕಮಿಷನರ್ ಆಗಿದ್ದಾಗಲೂ ಇದೇ ರೀತಿಯ ಆದೇಶಗಳನ್ನು ಹೊರಡಿಸಿದ್ದರು.

RELATED ARTICLES

Related Articles

TRENDING ARTICLES