Thursday, May 9, 2024

ಮುಂದಿನ ಆರು ದಿನಗಳ ಕಾಲ ಮಳೆ ಸಾಧ್ಯತೆ!: ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದ ವಿವಿಧೆಡೆ ಮುಂದಿನ ಆರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕೋಲಾರ ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಂಭವವಿದೆ.

ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಒಂದೆರಡು ಕಡೆ ಮಳೆ ಮುಂದುವರಿಯಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ :ಸ್ಕೈ ಡೈವಿಂಗ್ ಮೂಲಕ ಮೋದಿ ಅಭಿಮಾನ ಪ್ರದರ್ಶನ

ಇದೇ 13ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ರಾಜ್ಯದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ಹೇಳಿದೆ.

ಹುಬ್ಬಳ್ಳಿಯಲ್ಲಿ ತಂಪೆರೆದ ವರುಣ :

ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

ಚಿಕ್ಕೋಡಿ ಭಾಗದಲ್ಲಿ ವರುಣಾಗಮನ :

ಬಿಸಿಲಿನ ತಾಪದಿಂದ ಜನ ನಲುಗಿ ಹೋಗಿರುವ ನಡುವೆ ಬೆಳಗಾವಿ ಹಿಲ್ಲೆಯ ಚಿಕ್ಕೋಡಿಯಲ್ಲಿ ವರುಣ ತಂಪೆರೆದಿದ್ದಾನೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಿಪ್ಪಾಣಿ, ಹುಕ್ಕೇರಿ, ಸಂಕೇಶ್ವರ ಭಾಗದಲ್ಲಿ ಮಳೆಯಾಗಿದೆ.. ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಗಡಿ ಜನತೆಯಲ್ಲಿ ಮಂದಹಾಸ ಮೂಡಿದೆ.

RELATED ARTICLES

Related Articles

TRENDING ARTICLES