Wednesday, May 22, 2024

ಈಜುಕೊಳದಲ್ಲಿ ಮುಳುಗಿ ಬಾಲಕ ಸಾವು!

ಉಡುಪಿ : ಈಜುಕೊಳದಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ರೆಸಾರ್ಟ್​​ನಲ್ಲಿ ನಡೆದಿದೆ.

ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ, ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಮೊಹಮ್ಮದ್​ ಆರೀಝ್​ ಕುಟುಂಬ ಸದಸ್ಯರೊಂದಿಗೆ ಟಿನ್ ಟಾನ್ ಅಡ್ವೆಂಚರ್ಸ್ ರೆಸಾರ್ಟ್ ಗೆ ಪ್ರವಾಸಕ್ಕೆ ಹೋಗಿದ್ದ. ಈ ವೇಳೆ ರೆಸಾರ್ಟ್​ನ ಸ್ವಿಮಿಂಗ್ ಫುಲ್ ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ, ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 30 ಕೆಜಿ ಚಿನ್ನ ವಶಕ್ಕೆ ಪಡೆದ ಅಧಿಕಾರಿಗಳು!

ಈ ದುರ್ಘಟನೆಗೆ ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದೇ ಇರುವುದೇ ಕಾರಣ ಎಂದು ಕುಟುಂಬಸ್ಥರ ದೂರಿನಲ್ಲಿ ಆರೋಪ ಮಾಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES