Wednesday, May 22, 2024

ಜೆಡಿಎಸ್ ಹಾಗೂ ಬಿಜೆಪಿಗೆ ಭಯ ಉಂಟಾಗಿದೆ : ಸಿದ್ದರಾಮಯ್ಯ

ಚಾಮರಾಜನಗರ : ಅಧಿಕಾರದಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ಹೀನಾಯವಾಗಿ ಸೋತಿದ್ದಾರೆ. ಈ ಚುನಾವಣೆಯಲ್ಲಿ ಆ ಎರಡು ಪಕ್ಷಗಳಿಗೆ ಭಯ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಚಾಮರಾಜನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಅವರಿಗೆ ಯಾವುದೇ ಸಿದ್ಧಾತ ಇಲ್ಲ. ಕಾಂಗ್ರೆಸ್ ಸೋಲಿಸುವ ಗುರಿಯೊಂದಿಗೆ ಒಂದಾಗಿದ್ದಾರೆ. ಅವರಿಗೆ ಹೇಳಿಕೊಳ್ಳುವಂತ ಯಾವುದೇ ಸಾಧನೆ ಇಲ್ಲ. ಜನಪರವಾದ ಯಾವುದೇ ಯೋಜನೆಗಳನ್ನು ಕೊಟ್ಟಿಲ್ಲ ಎಂದು ಕುಟುಕಿದರು.

ಈ ಬಾರಿಯ ಚುನಾವಣೆಯಲ್ಲಿ ನಮ್ಮ ಎದುರಾಳಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ನಮ್ಮ ವಿರುದ್ದ ಚುನಾಣೆಗೆ ನಿಂತಿದ್ದಾರೆ. ಕಳೆದ ಚುನಾವಣೆಯಲ್ಲಿ ನಾವು 136 ಸ್ಥಾನಗಳನ್ನು ಗೆದ್ದಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿಯವರು ಸೇರಿ ಕಳೆದ ಬಾರಿ ಐದು ವರ್ಷ ಆಡಳಿತ ನಡೆಸಿದ್ದಾರೆ. ಆದರೆ, ಜನರ ಉದ್ಧಾರಕ್ಕಾಗಿ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಹೀಗಾಗಿ, ಮೋದಿಗೆ ವೋಟ್ ಕೊಡಿ ಅಂತ ಕೇಳುತ್ತಿದ್ದಾರೆ ಎಂದು ಛೇಡಿಸಿದರು.

15 ಲಕ್ಷ ಹಾಕ್ತೀವಿ ಅಂದ್ರು, ಹಾಕಿದ್ರಾ?

ಕೇಂದ್ರದಲ್ಲಿ 10 ವರ್ಷಗಳಿಂದ ಎನ್​​ಡಿಎ ಅಧಿಕಾರದಲ್ಲಿದೆ. ಆದರೆ, ಅವರು ಭರವಸೆ ಕೊಟ್ಟ ಯಾವುದೇ ಮಾತುಗಳನ್ನು ಈಡೇರಿಸಲಿಲ್ಲ. ಬಡವರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು, ಹಾಕಿದ್ರಾ? ರೈತರ ಆದಾಯವನ್ನು ದುಪ್ಪಟ್ಟು ಮಾಡ್ತೀವಿ ಅಂದ್ರು, ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು, ಕೊಟ್ರಾ? 5 ವರ್ಷಗಳಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು, ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES