Tuesday, May 7, 2024

ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ : ಕನ್ನಡಿಗ ರಾಹುಲ್ ಪಡೆಗೆ ಸೋಲುಣಿಸುತ್ತಾ ಪಂತ್ ಪಡೆ?

ಬೆಂಗಳೂರು : ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಲಕ್ನೋದ ಏಕನಾ ಸ್ಟೇಡಿಯಂ ಐಪಿಎಲ್​ನ 26ನೇ ಪಂದ್ಯ ನಡೆಯುತ್ತಿದೆ. ಸತತ ಮೂರು ಪಂದ್ಯ ಗೆದ್ದು ಬೀಗಿರುವ ಲಕ್ನೋಗೆ ಸೋಲಿನ ರುಚಿ ತೋರಿಸಲು ಪಂತ್ ಪಡೆ ರಣತಂತ್ರ ರೂಪಿಸಿದೆ. ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಡೆಲ್ಲಿಗೆ ಗೆಲುವು ಅನಿವಾರ್ಯವಾಗಿದೆ.

ಲಕ್ನೋ ತಂಡ ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯ ಗೆದ್ದಿದೆ. ಒಂದು ಪಂದ್ಯ ಸೋತು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಡೆಲ್ಲಿ ಆಡಿರುವ 5 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದು, 4 ಪಂದ್ಯ ಸೋತು ಕೊನೆಯ ಸ್ಥಾನದಲ್ಲಿದೆ.

ಐಪಿಎಲ್​ನಲ್ಲಿ ಉಭಯ ತಂಡಗಳು ಈವರೆಗೆ 3 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಲಕ್ನೋ ಮೂರು ಪಂದ್ಯಗಳನ್ನು ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಮೂರು ಪಂದ್ಯಗಳಲ್ಲಿ ಮುಗ್ಗರಿಸಿದೆ.

ಲಕ್ನೋ ಸೂಪರ್‌ ಜೈಂಟ್ಸ್‌

ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಯಶ್ ಠಾಕೂರ್

ಡೆಲ್ಲಿ ಕ್ಯಾಪಿಟಲ್ಸ್‌

ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಪೃಥ್ವಿ ಶಾ, ಡೇವಿಡ್ ವಾರ್ನರ್, ಶಾಯ್ ಹೋಪ್, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕುಲ್​ದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

RELATED ARTICLES

Related Articles

TRENDING ARTICLES