Sunday, May 5, 2024

ಲೋಕಸಭಾ ಅಖಾಡದಲ್ಲಿ ಇಂದು ನಾಮಿನೇಷನ್ ಸಲ್ಲಿಕೆ ಭರಾಟೆ

ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಹದಿನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ರಾಜ್ಯದಲ್ಲಿ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಬೆಳಗ್ಗೆ 11ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 12ರಿಂದ ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಇಂದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ಅಖಾಡ ರಂಗೇರಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ : ಕಾರ್ಯಕ್ರಮದಲ್ಲಿ ಬದಲಾವಣೆ

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಬೊಮ್ಮಾಯಿ, ಜೋಶಿ ಸೇರಿ ಹಲವರು ಕಣದಲ್ಲಿ ಇದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ಹಾವೇರಿಯಲ್ಲಿ ಬೊಮ್ಮಾಯಿ, ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದಾರೆ. ಕಲಬುರಗಿ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ತುಕಾರಾಂ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES

Related Articles

TRENDING ARTICLES