Friday, May 17, 2024

ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡುತ್ತೆ : ಆರ್. ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ಮಾಡಲಾಗುತ್ತದೆ ಎಂದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಹೇಳಿಕೆಗೆ ವಿಪಕ್ಷ ನಾಯಕ ಆರ್​. ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಹಲಾಲ್ ಕಟ್ ಕಾಂಗ್ರೆಸ್​ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್​ಗಳು ಬೆಳೆದರೆ ಸಹಿಸೋದೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ? ಪತಂಜಲಿ ಹಲಾಲ್ ಅಲ್ಲ ಅಂತಲೇ? ಎಂದು ಪ್ರಶ್ನೆ ಮಾಡಿದ್ದಾರೆ.

ದ್ವೇಷ ರಾಜಕಾರಣವೇ ನಿಮ್ಮನ್ನ ಸುಡಲಿದೆ

ಪತಂಜಲಿ ಉತ್ಪನ್ನ ಕೇಸರಿ ಬಟ್ಟೆ ತೊಡುವ ಯೋಗಗುರು ಬಾಬಾ ರಾಮ್ ದೇವ್ ಅವರದ್ದು ಅಂತಲೇ? ಪತಂಜಲಿ ಆತ್ಮನಿರ್ಭರ ಭಾರತದ ಪ್ರತೀಕ ಅಂತಲೇ? ಈ ದ್ವೇಷ ರಾಜಕಾರಣವೇ ಕಾಂಗ್ರೆಸ್ ಪಕ್ಷವನ್ನ ಸುಡಲಿದೆ. ಈ ನಿಮ್ಮ ಹಲಾಲ್ ಮಮಕಾರವೇ ನಿಮ್ಮನ್ನ ನಾಶ ಮಾಡಲಿದೆ ಎಂದು ಕಾಂಗ್ರೆಸ್​ ವಿರುದ್ಧ ಆರ್​. ಅಶೊಕ್ ಹರಿಹಾಯ್ದಿದ್ದಾರೆ.

RELATED ARTICLES

Related Articles

TRENDING ARTICLES