Tuesday, May 14, 2024

ರಾಮೇಶ್ವರಂ ಕೆಫೆ ಬ್ಲಾಸ್ಟ್​​ ಪ್ರಕರಣ : NIA ಯಿಂದ ಶಂಕಿತರ ಬಂಧನ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು.

 

ಇದನ್ನೂ ಓದಿ: ಲೋಕಸಭಾ ಅಖಾಡದಲ್ಲಿ ಇಂದು ನಾಮಿನೇಷನ್ ಸಲ್ಲಿಕೆ ಭರಾಟೆ

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES