Wednesday, May 22, 2024

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

ಗದಗ: ಬಿಜೆಪಿಯಿಂದ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು, ಸ್ಬಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಶಿರಹಟ್ಟಿ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ತದಿಂದ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ಮಾಹಿತಿ ಇಲ್ಲ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ : ಕಾರ್ಯಕ್ರಮದಲ್ಲಿ ಬದಲಾವಣೆ

ದೊಡ್ಡ ಬೆಂಬಲ ಸಿಗುತ್ತಿದೆ :
ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ. ನನಗೆ ಹಳ್ಳಿಗಳ ಸಂಪರ್ಕ ಇದೆ. ಜನರ ಪ್ರೀತಿ ವಿಶ್ವಾಸದ ಮೇಲೆ ನನಗೂ ಪ್ರೀತಿ ಇದೆ. ಯಾವುದೇ ಸಮಯ ವ್ಯರ್ಥ ಮಾಡದೇ ಪ್ರಚಾರ ಮಾಡುತ್ತಿದ್ದೇನೆ. ಪ್ರತಿಯೊಂದು ಗ್ರಾಮಪಂಚಾಯಿತಿ ಮಟ್ಟಕ್ಕೆ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಪ್ರಚಾರವಾಗುತ್ತಿದೆ. ಡೊಳ್ಳು ಬಾರಿಸುವ ಮೂಲಕ ಗದಗ ಕ್ಷೇತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದೇನೆ ಇದೊಂದು ಶುಭ ಸಂಕೇತವಾಗಿದೆ ಹಾವೇರಿ-ಗದಗ ಕ್ಷೇತ್ರದಲ್ಲಿ ಮೋದಿ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಬಗ್ಗೆ ಕೇಂದ್ರ ಪ್ರಚಾರ ಸಮಿತಿಯವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

15 ಕ್ಕೆ ನಾಮಪತ್ರ ಸಲ್ಲಿಕೆ :
ಬರುವ ದಿನಾಂಕ 15 ರಂದು ಮುಹೂರ್ತದ ಪ್ರಕಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಏಪ್ರಿಲ್ 19 ರಂದು ಬೃಹತ್ ಸಮಾವೇಶದ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ಆ ದಿನ ರಾಜ್ಯದ ಎಲ್ಲಾ ನಾಯಕರೂ ಬರಲಿದ್ದು, ಅದರಲ್ಲಿ ಪ್ರಮುಖವಾಗಿ ಯುಡಿಯೂರಪ್ಪ ಅವರು ಬರಲಿದ್ದಾರೆ ಎಂದರು.

ಗ್ಯಾರೆಂಟಿ ನಾಟಕ ನಡೆಯುವುದಿಲ್ಲ :
ಇದೇ ವೇಳೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಅವರು ಕೇಂದ್ರದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು. ಆದರೆ ಕಾಂಗ್ರೆಸ್ ಕೇವಲ 230 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಇಷ್ಟೇ ಸೀಟ್ ನಿಲ್ಲಿಸಿ ಅಷ್ಟು ಬೋಗಸ್ ಆಗಿ ಜನರಿಗೆ ದಾರಿ ತಪ್ಪಿಸುವ ಹಾಗೂ ಮೋಸ ಮಾಡುತ್ತಿದ್ದಾರೆ ಎನ್ನುವದು ಬಹಳಷ್ಟು ಸ್ಪಷ್ಟವಾಗಿ ಕಾಣುತ್ತಿದೆ ಮತ್ತು ಇಲ್ಲಿರುವ ಗ್ಯಾರಂಟಿ ಹಣೆಬರಹ ಜನರಿಗೆ ಅರ್ಥ ಆಗಿದೆ. ಆದರಿಂದ ಕಾಂಗ್ರೆಸ್ಸಿನ ಈ ಗ್ಯಾರಂಟಿ ನಾಟಕ ನಡೆಯುವುದಿಲ್ಲ ಎಂದರು.

RELATED ARTICLES

Related Articles

TRENDING ARTICLES