Wednesday, May 22, 2024

ಮತ್ತೊಂದು ದಾಖಲೆ ಬರೆದ ಯಶ್ : ರಾಮಾಯಣ ಚಿತ್ರದ ನಿರ್ಮಾಪಕನಾದ ರಾಕಿಭಾಯ್​!

ಬಾಲಿವುಡ್ ನ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ಟಗರುಪುಟ್ಟಿ ಮಾನ್ವಿತಾ ಗೆ ಕಂಕಣಭಾಗ್ಯ: ಮೈಸೂರು ಮೂಲದ ಟೆಕ್ಕಿ ಕೈಹಿಡಿಯಲಿರೋ ನಟಿ

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು.

ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ ‘ಟಾಕ್ಸಿಕ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ‘ಮಾನ್ಸ್ಟರ್ ಮೈಂಡ್’ ಕ್ರಿಯೇಷನ್ಸ್ ಕೂಡ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೇ ಬ್ಯಾನರ್ ನಡಿ ‘ರಾಮಾಯಣ’ ಸಿನಿಮಾಗೂ  ಯಶ್ ಬಂಡವಾಳ ಹೂಡುತ್ತಿದ್ದಾರೆ.

RELATED ARTICLES

Related Articles

TRENDING ARTICLES