Sunday, May 12, 2024

ಇಬ್ಬರು ಮಕ್ಕಳನ್ನ ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು

ಆನೇಕಲ್ : ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ಗಂಗಾದೇವಿ ಮಂಗಳವಾರ ರಾತ್ರಿ ಜಾಲಹಳ್ಳಿ ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಳು. ಬಳಿಕ ಬೆಳಗ್ಗೆ 112ಕ್ಕೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಳು. ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು. ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಗಂಗಾದೇವಿಯನ್ನ ಬಂಧಿಸಿದ್ದರು.

ಆರೋಪಿ ಗಂಗಾದೇವಿ ಗುರುವಾರ ಪರಪ್ಪನ ಅಗ್ರಹಾರ ಸೇರಿದ್ದಳು. ಅದೇ ದಿನ ರಾತ್ರಿ ಜೈಲಿನಲ್ಲಿನ ಶೌಚಾಲಯದಲ್ಲಿ ತಾನು ಧರಿಸಿದ್ದ ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಕೂಡಲೇ ಆಕೆಯನ್ನ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಲಾಗಿದೆ. ಆದರೆ, ದುರಾದೃಷ್ಟವಶಾತ್ ಗಂಗಾದೇವಿ ಸಾವನ್ನಪ್ಪಿದ್ದಾಳೆ.

ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಗಂಗಾದೇವಿ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಕಾರಣವೇನು?

ಗಂಗಾದೇವಿಗೆ 10 ವರ್ಷಗಳ ಹಿಂದೆ ಮದುವೆಯಾಗಿತ್ತು. ಆಕೆಯ ಗಂಡ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಆತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿತ್ತು. ಕೇಸ್ ಸಂಬಂಧ ಕೌನ್ಸಿಲಿಂಗ್ ನಡೆಸಿ ಆತನನ್ನು ಬಂಧಿಸಲಾಗಿತ್ತು. ಹೀಗಾಗಿ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಗಂಗಾದೇವಿ ಈ ಕೃತ್ಯ ಎಸಗಿದ್ದಳು.

RELATED ARTICLES

Related Articles

TRENDING ARTICLES