Thursday, May 2, 2024

ದಿವಂಗತ ಹೆಚ್​.ಎಸ್​ ಮಹದೇವ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮೈಸೂರು : ಲೋಕಸಭಾ ಚುನಾವಣೆಯ ಕಾವು ದಿನದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ಮುಖಂಡರು ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸುತ್ತಿರುವಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಮೈಸೂರು-ಚಾಮರಾಜನಗರ ಲೋಕಸಭಾ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳಲುವ ಹಠಕ್ಕೆ ಬಿದ್ದಿದ್ದಾರೆ.

ಅದುವಲ್ಲದೇ, ಈ ಎರಡು ಕ್ಷೇತ್ರಗಳನ್ನು ಸಿಎಂಗೆ ಪ್ರತಿಷ್ಠೆಯ ಕಣವಾಗಿರುವುದು ನಿಜ. ಸದ್ಯ ಸಿಎಂ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಮತಬೇಟೆಯಾಡುತ್ತಿದ್ದಾರೆ.

‘ದಿವಂಗತ ಮಹದೇವ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರ ಜೊತೆ ಮಾತನಾಡುತ್ತ, ಅವರ ಜೊತೆಗೂಡಿ ಉಪಹಾರ ಸೇವಿಸಿದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್​​ ಅಧಿಕೃತ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಾನ ಮರ್ಯಾದೆ ಇದ್ದಿದ್ರೆ ಸಿಎಂ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್​ ಮನೆಗೆ ಹೋಗುತ್ತಿರಲಿಲ್ಲ: ಆರ್​ ಅಶೋಕ್​

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ಸ್ಪರ್ಧಿಸಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್​ ಒಡೆಯರ್ ಅವರು ಕಣಕ್ಕೆ ಇಳಿದಿದ್ದಾರೆ.

ಇನ್ನೊಂದು ಕಡೆ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಸುನಿಲ್​ ಬೋಸ್​ ಸ್ಪರ್ಧೆಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯಾಗಿ ಎಸ್​. ಬಾಲರಾಜ್ ಅವರು ಕಣದಲ್ಲಿದ್ದಾರೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತ ಲೋಕಸಭಾ ಚುನಾವಣೆ ನಡೆಯಲ್ಲಿದ್ದು, ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

RELATED ARTICLES

Related Articles

TRENDING ARTICLES