Wednesday, May 22, 2024

ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ : ಕುಮಾರಸ್ವಾಮಿ

ತುಮಕೂರು : ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಎನ್​ಡಿಎ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಭಾಷಣದಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ್ದಾರೆ.

ಉಚಿತ ಗ್ಯಾರಂಟಿ ಯೋಜನೆ ಕೊಡಲು ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ ಈ ರೀತಿ ಎಡವಟ್ಟು ಮಾಡಿಕೊಂಡಿದ್ದಾರೆ. ಗಮನ ಇಟ್ಟು ಎರಡು ಮಾತುಗಳನ್ನ ಕೇಳಬೇಕು. ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ ಎನ್ನುತ್ತಲೇ ಗ್ಯಾರಂಟಿಗಳನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.

RELATED ARTICLES

Related Articles

TRENDING ARTICLES