Saturday, May 11, 2024

ಲೋಕಸಭಾ ಚುನಾವಣೆ: ಹಿರಿಯ ನಾಗರೀಕರಿಗೆ ಇಂದು ಅಂಚೆ ಮತದಾನ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದ್ದು ಇಂದು ಅಂಚೆ ಮತದಾನ ಆರಂಭವಾಗುತ್ತಿದೆ.

ಏಪ್ರಿಲ್ 18ರ ವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ಮನೆಯಿಂದಲೇ ಕುಳಿತು ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಇದ್ದಾರೆ. 22,222 ಮಂದಿ ವಿಶೇಷ ಚೇತನರನ್ನು ಪಟ್ಟಿ ಮಾಡಲಾಗಿದೆ. ಇವರಲ್ಲಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ 201 ವಿಶೇಷ ಚೇತನ ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಏ.14ರಂದು ರಾಜ್ಯಕ್ಕೆ ಮೋದಿ ಆಗಮನ: ಕಾರ್ಯಕ್ರಮದ ಡಿಟೇಲ್​ ಇಲ್ಲಿದೆ

ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡಲಿದ್ದು, ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಬ್ಸರ್ವರ್ ಕಡ್ಡಾಯವಿದೆ. ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಲಿದ್ದು, ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ.

ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಫಿ ಮೂಲಕ ಕಡ್ಡಾಯ ಸೆರೆ ಹಿಡಿಯಲಾಗುತ್ತದೆ. ಪ್ರತಿ ಮತದಾರರ ಮನೆಗೆ ಎರಡು ಬಾರಿ ಟೀಮ್‌ ಭೇಟಿ ನೀಡಲಿದ್ದು, ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ದರೆ ಮತ್ತೆ ಮತದಾನ ನಡೆಸಲು ಅವಕಾಶವಿರುವುದಿಲ್ಲ.

 

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES