Sunday, May 5, 2024

ಜಯನಗರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪೊಲೀಸರ ಕಣ್ತಪ್ಪಿಸಿ ಬೆಂಗಳೂರಿನ ಜಯನಗರದಲ್ಲಿ ದಾಖಲೆ ಇಲ್ಲದೆ ಬೆಂಜ್​ ಕಾರ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಾಗ ಕೋಟಿ ಕೋಟಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಜಯನಗರದ ಚೆಕ್​ ಪೋಸ್ಟ್​ ಬಳಿ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡಲು ಮುಂದಾದಾಗ, ಮೊದಮೊದಲು ತಪಾಸಣೆಗೆ ಅಡ್ಡಿಪಡಿಸಿದ್ದಾರೆ. ಅನುಮಾನಬಾರದಿರಲಿ ಎಂದು ಸುಮಾರು 4 ಕೋಟಿ ರೂ. ಹಣವನ್ನು ಚೀಲವೊಂದರಲ್ಲಿ ತುಂಬಿಸಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದಾಗ ಮಾವಿನ ಹಣ್ಣಿನ ಬ್ಯಾಗ್‌ ಅದು ಬಿಡ್ರೀ ಎಂದು ದಬಾಯಿಸಿ, ಕಾರು ಲಾಕ್‌ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!

ಆದರೆ, ಇವರ ನಡೆಯಿಂದ ಮತ್ತಷ್ಟು ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ನಾಲ್ಕು ಕೋಟಿ ರೂ. ಹಣ ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಸದ್ಯ ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ, 4 ಕೋಟಿ ರೂ. ಹಣ ಮತ್ತು  ಹಣ ತುಂಬಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES

Related Articles

TRENDING ARTICLES