Tuesday, May 7, 2024

ಇಂದು ರಾಜಸ್ಥಾನ Vs ಪಂಜಾಬ್ ಕಾಳಗ : ಯಾವ ತಂಡ ಗೆಲ್ಲಬಹುದು ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್​ನ 27ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ.

ಚಂಡೀಗಢದ ಮುಲ್ಲನ್​ಪುರ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಎರಡು ತಂಡಗಳು ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ್ದು, ಈ ಪಂದ್ಯ ಗೆದ್ದ ತಂಡ ಗೆಲುವಿನ ಹಳಿಗೆ ಮರಳಲಿದೆ.

ಐಪಿಎಲ್​ ಇತಿಹಾಸದಲ್ಲಿ ಈವರೆಗೆ ಉಭಯ ತಂಡಗಳು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ರಾಜಸ್ಥಾನ್ ರಾಯಲ್​ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್​ 11 ಪಂದ್ಯಗಳಲ್ಲಿ ಜಯ ದಾಖಲಿಸಿದೆ.

ಪ್ರಸ್ತುತ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್​ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ಹಾಗೂ ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಂಜಾಬ್ ಆಡಿರುವ 5 ಪಂದ್ಯಗಳಲ್ಲಿ 2 ಗೆಲುವು ಹಾಗೂ 3 ಸೋಲು ಕಂಡು 8ನೇ ಸ್ಥಾನದಲ್ಲಿದೆ.

ರಾಜಸ್ಥಾನ್‌ ರಾಯಲ್ಸ್‌

ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮಯರ್, ರಿಯಾನ್ ಪರಾಗ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್

ಪಂಜಾಬ್ ಕಿಂಗ್ಸ್

ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್

RELATED ARTICLES

Related Articles

TRENDING ARTICLES