Monday, May 13, 2024

ಕರಾವಳಿ ಜನ ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ವೋಟು ಹಾಕಲ್ಲ : ಪ್ರಧಾನಿ ಮೋದಿ

ಮಂಗಳೂರು : ಕರಾವಳಿ ಜನತೆ ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಪಕ್ಷಕ್ಕೆ ಮತ ನೀಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಬೃಹತ್‌ ರೋಡ್‌ ಶೋ ಬಳಿಕ ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರೋಡ್​ ಶೋನ ಕೆಲವು ಅದ್ಭುತ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್​ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕುಟುಕಿದ್ದಾರೆ.

ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ ‘ಸುಗಮ ಜೀವನ’ ಕಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂದು ಹೇಳಿದ್ದಾರೆ.

ಕರಾವಳಿ ಜನತೆಗೆ ನನ್ನ ಕೃತಜ್ಞತೆಗಳು

ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES