Sunday, May 12, 2024

ಮೋದಿ ಇರೋವರೆಗೆ ಹಿಂದೂ ಧರ್ಮ ನಾಶ ಅಸಾಧ್ಯ : ಪ್ರಧಾನಿ ಮೋದಿ

ಮೈಸೂರು : ಮೋದಿ ಇರುವವರೆಗೂ ಹಿಂದೂ ಧರ್ಮ ಹಾಗೂ ಸನಾತನ ಧರ್ಮದ ನಾಶ ಅಸಾಧ್ಯ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಹಾಗೂ ಸನಾತನ ಧರ್ಮದ ನಾಶವೇ ಕಾಂಗ್ರೆಸ್ ಉದ್ದೇಶ. ಎಲ್ಲಿಯವರೆಗೆ ಮೋದಿ ಇರುತ್ತಾರೋ ಇದು ಅಸಾಧ್ಯ. ಇದು ಮೋದಿ ಗ್ಯಾರಂಟಿ ಎಂದು ಹೇಳಿದರು.

ನಿಮಗೆಲ್ಲಾ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ತಾಯಿ ಚಾಮುಂಡಿ, ತಾಯಿ ಭುವನೇಶ್ವರಿ, ತಾಯಿ ಕಾವೇರಿ ಪಾದಕ್ಕೆ ನನ್ನ ಪ್ರಣಾಮಗಳು. ಸಂಸದೀಯ ಕ್ಷೇತ್ರದಲ್ಲಿ ದೇವೇಗೌಡರದ್ದು ಬಹಳ ದೊಡ್ಡ ಹೆಸರು. ಅವರಿಗೆ ನನ್ನ ನಮನಗಳು ಎಂದು ತಿಳಿಸಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ

ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸ್ಟೇಟ್ ಬ್ಯಾಂಕ್ ಎಟಿಎಂ. ಕರ್ನಾಟಕದ ನೂರಾರು ಕೋಟಿ ಕಪ್ಪು ಹಣ ದೇಶದ ಚುನಾವಣೆಗೆ ಬಳಕೆ ಆಗುತ್ತಿದೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ವಿಕಾಸ, ಬಡವರ ಕಲ್ಯಾಣ ಕಾರ್ಯಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕೊಡಲಾಗುತ್ತಿಲ್ಲ. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನಿಲ್ಲಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ ಕೊಡುತ್ತಿದ್ದ 4 ಸಾವಿರ ರೂಪಾಯಿ ಸಹಾಯ ಧನ ಬಂದ್ ಮಾಡಿದ್ದಾರೆ ಎಂದು ಹರಿಹಾಯ್ದರು.

ಬಡವರಿಗೆ 3 ಕೋಟಿ ಮನೆ ನಿರ್ಮಾಣ

ಬಿಜೆಪಿ ಸಂಕಲ್ಪ ಪತ್ರವನ್ನು ಪ್ರಸ್ತಾಪಿಸಿದ ಅವರು, ಮೈಸೂರು ಸಾಂಸ್ಕೃತಿಕ ರಾಜಧಾನಿ. ಇಲ್ಲಿನ ದಸರಾ ಇಡೀ ದೇಶಕ್ಕೆ ಪ್ರಖ್ಯಾತಿ. ಬಿಜೆಪಿ ಸಂಕಲ್ಪ ಪತ್ರ ಮೋದಿ ಕೀ ಕಾ ಗ್ಯಾರಂಟಿಯಾಗಿದೆ. ಬಡವರಿಗೆ 3 ಕೋಟಿ ಮನೆ ನಿರ್ಮಾಣ ಮಾಡುತ್ತೇವೆ. ಉಚಿತ ಪಡಿತರ ವಿತರಣೆ ಮಾಡುತ್ತೇವೆ. ಆಯುಷ್ಮಾನ್ ಭಾರತ್ ಅಡಿ ಹಿರಿಯರಿಗೆ ಉಚಿತ ವೈದ್ಯಕೀಯ ಸೇವೆ ಎಂದು ಪ್ರಧಾನಿ ಮೋದಿ ಹೇಳಿದರು.

RELATED ARTICLES

Related Articles

TRENDING ARTICLES