Thursday, May 16, 2024

ಸಲ್ಮಾನ್​ ಖಾನ್ ಅಪಾರ್ಟ್​ಮೆಂಟ್​ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಇಂದು ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ನಡೆದಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.

RELATED ARTICLES

Related Articles

TRENDING ARTICLES