Tuesday, May 7, 2024

ಹೆಡ್ ಆರ್ಭಟಕ್ಕೆ RCB ಬರ್ನ್ : 39 ಎಸೆತಗಳಲ್ಲೇ ಶತಕ ಸಿಡಿಸಿದ ಟ್ರಾವಿಸ್

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್ ಟ್ರಾವಿಸ್​ ಹೆಡ್​ ವಿಧ್ವಂಸಕ ಬ್ಯಾಟಿಂಗ್ ಪ್ರದರ್ಶಿಸಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್​ ಪಂದ್ಯ ನಡೆಯಿತು. ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್​ ಅದ್ಭುತ ಆರಂಭ ಪಡೆಯಿತು.

ಆರ್​ಸಿಬಿ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಟ್ರಾವಿಸ್​ ಹೆಡ್​ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. 50 ಬಳಿಕವೂ ಅಬ್ಬರಿಸಿ ಬೊಬ್ಬಿರಿದರು. ಕೇವಲ 39 ಎಸೆತಗಳಲ್ಲಿ ಆಕರ್ಷಕ ಶತಕ ಸಿಡಿಸಿದರು.

ಟ್ರಾವಿಸ್​ ಹೆಡ್​ ಬ್ಯಾಟ್​ನಿಂದ 8 ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿ ಸಿಡಿದವು. 255.26 ಸ್ಟ್ರೈಕ್​ ರೇಟ್​ನೊಂದಿಗೆ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದರು.

RELATED ARTICLES

Related Articles

TRENDING ARTICLES