Wednesday, May 1, 2024

ಏಪ್ರಿಲ್ 24ರಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ಲೋಕಸಭಾ ಚುನಾವಣೆಯ ಮೊದಲ‌ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಏಪ್ರಿಲ್ 24ರಿಂದ ಬೆಂಗಳೂರು ನಗರ ಜಿಲ್ಲೆಯಾದ್ಯಾಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಏಪ್ರಿಲ್ 24ರ ಸಂಜೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎ. ದಯಾನಂದ ಆದೇಶದಲ್ಲಿ ತಿಳಿಸಿದ್ದಾರೆ.

ಮತ ಏಣಿಕೆಯ ಹಿನ್ನೆಲೆ ಜೂನ್ 4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರ ಜಿಲ್ಲಾ ವ್ಯಾಪ್ತಿಯಲ್ಲಿ 5 ಜನಕ್ಕಿಂತ ಹೆಚ್ಚು ಜನ ಸೇರುವುದು, ಸಭೆ, ಸಮಾರಂಭ ನಡೆಸದಂತೆ ನಿಷೇಧಿಸಲಾಗಿದೆ. ಮತಗಟ್ಟೆಯ 100 ಮೀಟರ್ ಅಂತರದಲ್ಲಿ ಜೆರಾಕ್ಸ್, ಸೈಬರ್ ಕೆಫೆ, ಬುಕ್ ಸ್ಟಾಲ್​​ಗಳ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ.

ಮತಗಟ್ಟೆ 100 ಮೀ ಅಂತರದಲ್ಲಿ ಅನುಮತಿ ಪಡೆದ ಚುನಾವಣಾ ಸಿಬ್ಬಂದಿಗಳನ್ನ ಹೊರತುಪಡಿಸಿ ಇತರರಿಗೆ ಮೊಬೈಲ್, ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧಿಸಲಾಗಿದೆ. ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಧಿಕಾರಿ ದಯಾನಂದ್‌ ಕ್ರಮದ ಎಚ್ಚರಿಕೆ ಕೊಟ್ಟಿದ್ದಾರೆ.

RELATED ARTICLES

Related Articles

TRENDING ARTICLES