Friday, May 3, 2024

ಕುಮಾರಸ್ವಾಮಿ ಒಬ್ಬ ‘ದಾರಿ ತಪ್ಪಿದ ಮಗ’ : ನಟ ಪ್ರಕಾಶ್ ರಾಜ್

ಮಂಡ್ಯ : ಕುಮಾರಸ್ವಾಮಿ ಒಬ್ಬ ದಾರಿ ತಪ್ಪಿದ ಮಗ. ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಂಡ್ಯದ ರೈತ ಸಭಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ? ಎಂದು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದರು. ಇದಕ್ಕೆ ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳ ನನ್ನ ಮಗ ಯಾರು ಎಂದು ಮಂಡ್ಯದ ಜನತೆ ನಿರ್ಧಸುತ್ತಾರೆ ಎಂದು ತಿಳಿಸಿದರು.

ರಾಜರನ್ನು ನೋಡಲು ಮಹಾಪ್ರಭು ಬಂದಿದ್ದಾರೆ

ಲೋಕಸಭಾ ಚುನಾವಣೆ ಬಂದಿರುವುದರಿಂದ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ದಾರೆ. ಇದರಿಂದಾಗಿ ಮಹಾಪ್ರಭುವಿನ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಸ್ಸುಗಳು ಹೊರಟಿವೆ. ಇದರಿಂದ ಬೆಂಗಳೂರು ಹಾಗೂ ಮೈಸೂರು ಹೈವೈನಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ? ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES