Sunday, May 12, 2024

ಮಾಜಿ ಸಿಎಂ ಕುಮಾರಸ್ವಾಮಿಗೆ ಜೈಲು ಶಿಕ್ಷೆಯ ಚಾಟಿ ಬೀಸಿದ ಮಹಿಳಾ ಆಯೋಗ!

ಬೆಂಗಳೂರು : ಗ್ಯಾರೆಂಟಿ ಯೋಜನೆ ಟೀಕಿಸುವ ಭರದಲ್ಲಿ ಮಹಿಳೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ವಿರುದ್ದ ಮಹಿಳಾ ಆಯೋಗ ಗರಂ ಆಗಿದ್ದು ದೂರು ದಾಖಲಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ತುಮಕೂರಿನಲ್ಲಿ ಎನ್​ಡಿಎ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರದ ವೇಳೆ ಗ್ಯಾರೆಂಟಿ ಯೋಜನೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್​ ಗ್ಯಾರೆಂಟಿ ಯೋಜನೆಗಳು ರಾಜ್ಯದ ಹೆಣ್ಣುಮಕ್ಕಳನ್ನು ದಾರಿ ತಪ್ಪಿಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ರಾಜ್ಯದ್ಯಂತ ಮಹಿಳೆಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಅವರು ಈ ಕುರಿತು ಉತ್ತರ ನೀಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ನೋಟೀಸ್​ ನೀಡಿ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಮಹಿಳೆಯರನ್ನು ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಕುಮಾರಸ್ವಾಮಿ ಸ್ಪಷ್ಟನೆ

ಮಹಿಳೆಯನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲೆ ಮಾಡುವುದು ಸರ್ಕಾರದ ಗುರಿ. ಆದರೇ, ಒಬ್ಬರು ಪೆಗ್​ ಅಂತಾರೆ ಮತ್ತೊಬ್ಬರು ಗ್ಯಾರೆಂಟಿ ಯೋಜನೆಗಳ ಹೆಸರಿನಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಭಾಷೆ ಬಳಸಬಾರದು, ಹೆಣ್ಣನ್ನು ಅವಮಾನ ಮಾಡಿದರೇ ಹೇಗೆ? ಈ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಜಯ್​ ಪಾಟೀಲ್​ ರೇವೂರ್ ಅವರಿಗೆ ನೋಟೀಸ್​ ನೀಡಲಾಗುವುದು ಏಳು ದಿನಗಳ ಒಳಗೆ ಮಹಿಳಾ ಆಯೋಗದ ಕಚೇರಿಗೆ ಬಂದು ಉತ್ತರ ನೀಡದಿದ್ದರೇ ಜೈಲುವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES