Thursday, May 9, 2024

ಡಾ.ಕೆ. ಸುಧಾಕರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಅಬ್ಬರದ ಪ್ರಚಾರ

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರ ಪರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಬ್ಬರದ ಪ್ರಚಾರ ನಡೆಸಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕೆಲ ಸಮಸ್ಯೆಗಳನ್ನ ಶಾಶ್ವತವಾಗಿ ಬಗೆಹರಿಸುವಂತೆ ಭರವಸೆ ನೀಡಿದರು.

ಇಂದು ಇಡೀ ದಿನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಾದ್ಯಂತ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಕುಮಾರಣ್ಣ ಪ್ರಚಾರ ನಡೆಸಿದರು. ಮೊದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದೇವರ ಮಠದಲ್ಲಿ ಪ್ರಚಾರ ಪ್ರಾರಂಭಿಸಿದ ಮಾಜಿ ಮುಖ್ಯಮಂತ್ರಿ ನಂತರ ದೊಡ್ಡಬಳ್ಳಾಪುರ ನಗರದ ಆಸ್ಪತ್ರೆ ಸರ್ಕಲ್ ನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಮತ ನೀಡುವಂತೆ ಮನವಿ ಮಾಡಿದರು. ಡಾ.ಕೆ. ಸುಧಾಕರ್ ಸಹ ದೊಡ್ಡಬಳ್ಳಾಪುರದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಒಂದು ಅಂಕಿ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿದವರು ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದಿಲ್ಲ ಅಪಪ್ರಚಾರಕ್ಕೆ ಯಾವತ್ತು ಕಿವಿ ಕೊಡಬೇಡಿ ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಸರ್ಟಿಫಿಕೇಟ್ ಬೇಕಿಲ್ಲ

ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್ನವರಿಗೆ ಮಾಡೋಕೆ ಕೆಲಸ ಇಲ್ಲ, ಮಾತನಾಡೋಕೆ ಏನು ಇಲ್ಲ ಆದ್ರಿಂದ ಈ ರೀತಿ ಪ್ರತಿಭಟನೆ ಮಾಡ್ತಾ ಇದ್ದಾರೆ ಬಿಸಿಲಿನಲ್ಲಿ ಒಣಗಲಿ ಬಿಡಿ, ಕೆಲವೊಂದು ಸ್ಲೋಗನ್ ಶುರುವಾಗಿ ಬಿಟ್ಟಿದೆ. ಗೋಬ್ಯಾಕ್ ಗೋಬ್ಯಾಕ್ ಅನ್ನೋದು. ಇನ್ನೂ ಡಿ.ಕೆ. ಶಿವಕುಮಾರ್ ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲ್ಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಅವರ ಸರ್ಟಿಫಿಕೇಟ್ ಬೇಕಾ ನನಗೆ. ಗೆಲ್ಲಬೇಕು ಅಥವಾ ಸೋಲಬೇಕು ಎಂಬುದು ಜನರು ಸರ್ಟಿಫಿಕೇಟ್ ಕೊಡುತ್ತಾರೆ. ಡಿ.ಕೆ ಶಿವಕುಮಾರ್ ಸರ್ಟಿಫಿಕೇಟ್ ಬೇಕಿಲ್ಲ ನನಗೆ ಎಂದು ವಾಗ್ದಾಳಿ ನಡೆಸಿದರು.

ಮೋದಿ, ವಿಜಯೇಂದ್ರ, ಪವನ್ ಕಲ್ಯಾಣ್ ಪ್ರಚಾರ

ಒಟ್ಟಾರೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಎರಡು ಪಕ್ಷದವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇನ್ನೂ ಬಿ.ವೈ. ವಿಜಯೇಂದ್ರ,ತೆಲುಗು ನಟ ಪವನ್ ಕಲ್ಯಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಬಾಕಿ ಇದೆ. ಚುನಾವಣೆ ಒಳಗೆ ಮತದಾರರ ಮನ ಗೆಲ್ಲಲ್ಲು ಸುಧಾಕರ್ ಪಣತೊಟ್ಟು ನಿಂತಿದ್ದಾರೆ.

RELATED ARTICLES

Related Articles

TRENDING ARTICLES