Monday, May 6, 2024

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ಬಂಧನ!

ಮುಂಬೈ : ಬಾಲಿವುಡ್​ ನಟ ಸಲ್ಮಾನ್ ಖಾನ್​ ರ ನಿವಾಸದ ಎದುರು ಭಾನುವಾರ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್​ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಸಲ್ಮಾನ್ ಖಾನ್​ ಅವರ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಆರೋಪಿಗಳು, ಆರೋಪಿಗಳನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಗುಜರಾತ್‌ನ ಭುಜ್ ನಲ್ಲಿ ಬಂಧಿಸಿ ಕಳೆದ ರಾತ್ರಿಯೇ ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆತಂದಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್ ಅಪಾರ್ಟ್​ಮೆಂಟ್​ ಮುಂದೆ ಗುಂಡಿನ ದಾಳಿ

ನಿನ್ನೆ ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ಬಳಿಕ ಮುಂಬೈನಿಂದ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈಗೆ ಕರೆತರಲಾಗಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES