Thursday, May 2, 2024

ಬಲಿಷ್ಠ RR ಮಣಿಸಿ ಅಗ್ರಸ್ಥಾನಕ್ಕೇರುತ್ತಾ KKR? ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್​ನ 31ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಈ ರೋಚಕ ಪಂದ್ಯ ನಡೆಯಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನವನ್ನು ತವರು ಅಂಗಳದಲ್ಲಿ ಮಣಿಸಿ ನಂ.1 ಸ್ಥಾನಕ್ಕೇರಲು ಶ್ರೇಯಸ್ ಅಯ್ಯರ್ ಪಡೆ ಸಜ್ಜಾಗಿದೆ.

ಐಪಿಎಲ್​ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಕೆಕೆಆರ್​ 14 ಪಂದ್ಯ ಗೆದ್ದರೆ, ರಾಜಸ್ಥಾನ 13 ಪಂದ್ಯ ಗೆದ್ದಿದೆ. ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಕೆಕೆಆರ್​ 6 ಹಾಗೂ ಆರ್​ಆರ್​ 3 ಪಂದ್ಯದಲ್ಲಿಗೆಲುವು ಸಾಧಿಸಿದೆ.

ಪ್ರಸಕ್ತ ಟೂರ್ನಿಯಲ್ಲಿ ರಾಜಸ್ಥಾನ 6 ಪಂದ್ಯಗಳನ್ನು ಆಡಿದ್ದು, 5 ಗೆಲುವು ಹಾಗೂ ಒಂದು ಪಂದ್ಯದಲ್ಲಿಸೋತಿದೆ. 10 ಅಂಕಗಳೊಂದಿಗೆ ಪಾಯಿಂಟ್ಸ್​ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೆಕೆಆರ್​ 5 ಪಂದ್ಯಗಳನ್ನು ಆಡಿದ್ದು, 4 ಪಂದ್ಯ ಗೆದ್ದು ಒಂದು ಪಂದ್ಯ ಸೋತಿದೆ. 8 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಆರ್​ಆರ್ ಸಂಭವನೀಯ XI

ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಆರ್. ಅಶ್ವಿನ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ/ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್

ಕೆಕೆಆರ್​ ಸಂಭವನೀಯ XI

ಶ್ರೇಯಸ್ ಅಯ್ಯರ್ (ನಾಯಕ), ಫಿಲ್ ಸಾಲ್ಟ್, ಸುನಿಲ್ ನರೈನ್, ರಾಘವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ

RELATED ARTICLES

Related Articles

TRENDING ARTICLES