Friday, May 10, 2024

ಏ.18 ರಿಂದ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು : ಬಿಸಿಲ ಝಳದಿಂದ ಬಸವಳಿದಿದ್ದ ರಾಜ್ಯದ ಜನತೆಗೆ ತಂಪೆರೆಯಲು ವರುಣನ ಆಗಮನವಾಗುತ್ತಿದೆ. ಈ ಬಾರಿ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.

ವಾಡಿಕೆಗಿಂತ ಹೆಚ್ಚು ಮಳೆ

ದೇಶದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಶೇ.106 ರಷ್ಟು ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭೀಕರ ಬರಗಾಲದಿಂದ ನಲುಗಿರುವ ರೈತಾಪಿ ವರ್ಗಕ್ಕೆ ಇದು ಶುಭದಾಯಕ ಸುದ್ದಿಯಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ ಮುಂಗಾರು ಋತುವಿನಲ್ಲಿ 87 ಸೆ.ಮೀ. ಮಳೆ ಸುರಿಯುವ ಮುನ್ಸೂಚನೆ ಇದೆ.

RELATED ARTICLES

Related Articles

TRENDING ARTICLES