Wednesday, May 1, 2024

ಮೆಜೆಸ್ಟಿಕ್ ಬಳಿ ಖಾಸಗಿ ಬಸ್​ಗೆ ಬೆಂಕಿ, ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಬಸ್​ ನಿಲ್ದಾಣದ ಸಮೀಪ ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್​ವೊಂದು ಬೆಂಕಿಗೆ ಅಹುತಿಯಾಗಿದೆ. ಭಾರಿ ದುರಂತವೊಂದು ತಪ್ಪಿದೆ.

ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಪಾಯದ ವರದಿ ಆಗಿಲ್ಲ. ಜೆ.ಕೆ ಕನೆಕ್ಟ್ ಎಂಬ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES