Wednesday, May 1, 2024

ಇಂದು ಹಿರಿಯ ನಟ ದ್ವಾರಕೀಶ್‌ ಅಂತ್ಯಕ್ರಿಯೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್​​​​ ನಿಧನರಾಗಿದ್ದು, ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ನಡೆಯಲಿದೆ.

ಗಣ್ಯರ ಮತ್ತು ಕುಟುಂಬಸ್ಥರು ದ್ವಾರಕೀಶ್​​​​ ಅವರ ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರಲಾಗುತ್ತದೆ. ನಂತರ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: ಹಿರಿಯ ನಟ ಕರುನಾಡ ಕುಳ್ಳ ದ್ವಾರಕೀಶ್ ನಿಧನ

ಈಗಾಗಲೇ ಚಿತ್ರರಂಗದ ಗಣ್ಯಾತಿ ಗಣ್ಯರು ಸಹ ಕಲಾವಿದರು ಸೇರಿದಂತೆ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಭೇಟಿ ನೀಡಿ ದ್ವಾರಕೀಶ್ ಅಂತಿಮ ದರ್ಶನವನ್ನು ಪಡೆದು ಕಂಬನಿ ಮಿಡಿದಿದ್ದಾರೆ

 

RELATED ARTICLES

Related Articles

TRENDING ARTICLES