Tuesday, April 30, 2024

ಬಿಜೆಪಿಗೆ ಶಾಕ್​ ನೀಡಿ ಕಾಂಗ್ರೆಸ್​ ಸೇರ್ಪಡೆಗೊಂಡ ಕರಡಿ ಸಂಗಣ್ಣ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಟಿಕೆಟ್​ ವಂಚಿತ ಮುಖಂಡರು ಪಕ್ಷಾಂತರ ಪರ್ವ ಆರಂಭಿಸಿದ್ದು ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ಹಲವರು ಬಿಜೆಪಿ ತೊರೆದು ಬುಧವಾರ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಪಕ್ಷದ ಭಾವುಟ ಕೈಗೆ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು. ಇದೇ ವೇಳೆ ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್ ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮತ್ತಿತರರು ಕಾಂಗ್ರೆಸ್​ ಪಕ್ಷ ಸೇರ್ಪಡೆ ಗೊಂಡರು.

ಇದನ್ನೂ ಓದಿ: ಕಾಂಗ್ರೆಸ್​ ಗೆ ಕೈಕೊಟ್ಟು ಕಮಲ ಹಿಡಿದ ಅಖಂಡ ಶ್ರೀನಿವಾಸ್​ ಮೂರ್ತಿ

ಪಕ್ಷ ಸೇರ್ಪಡೆ ಕಾರ್ಯಕ್ರಮದ ವೇಳೇ ಸಚಿವ ಶಿವರಾಜ್ ತಂಗಡಗಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES