Wednesday, May 8, 2024

ದುಬೈನಲ್ಲಿ ಮಳೆ ಆರ್ಭಟ : ವಿಮಾನ ಹಾರಟ ರದ್ದು

ದುಬೈ: ದುಬೈನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿವೆ.

ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ ಮನೆಗಳಲ್ಲಿ ಇರುವಂತೆ ವಿನಂತಿಸಿದೆ. ಶಾಲೆಗಳು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುತ್ತಿವೆ. ಸರ್ಕಾರಿ ನೌಕರರಿಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಹೆದ್ದಾರಿಗಳು ಮತ್ತು ರಸ್ತೆಗಳಿಂದ ನೀರನ್ನು ತೆಗೆದುಹಾಕಲು ಆಡಳಿತವು ಬೃಹತ್ ಪಂಪ್‌ಗಳನ್ನು ಅಳವಡಿಸಿದೆ.

ಇದನ್ನೂ ಓದಿ: ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಷ್ಟ್ರೀಯ ಹವಾಮಾನ ಕೇಂದ್ರವು ದುಬೈ, ಅಬುಧಾಬಿ, ಶಾರ್ಜಾ ಮತ್ತು ಇತರ ಕೆಲವು ಎಮಿರೇಟ್‌ಗಳ ನಿವಾಸಿಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಯುಎಇಯ ನೆರೆಯ ದೇಶಗಳಾದ ಬಹ್ರೇನ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲೂ ಭಾರೀ ಮಳೆಯಾಗಿದೆ.

RELATED ARTICLES

Related Articles

TRENDING ARTICLES