Thursday, May 9, 2024

ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 19ರಂದು ಬೆಂಗಳೂರಿನಲ್ಲಿ ಮಳೆಯಾಗಲಿದ್ದು, ಏಪ್ರಿಲ್ 18ರಂದು ಕೊಡಗು, ಮೈಸೂರು, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಕೆಲವೆಡೆ ಮಳೆಯಾಗಲಿದೆ. ಒಟ್ಟಿನಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಇಂದು ಹಿರಿಯ ನಟ ದ್ವಾರಕೀಶ್‌ ಅಂತ್ಯಕ್ರಿಯೆ

ರಾಜ್ಯದಲ್ಲಿ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ 19 ಹಾಗೂ 20ರಂದು ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಇನ್ನು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಎಚ್​ಎಎಲ್​ನಲ್ಲಿ 35.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES