Wednesday, May 1, 2024

ಏ.19. ನಾಳೆ ಮೊದಲ ಹಂತದ ಲೋಕಸಭಾ ಎಲೆಕ್ಷನ್‌

ದೆಹಲಿ: 2024 ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದೆ. ಏ.17 ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ ಹಂತದಲ್ಲಿ ಒಟ್ಟು 1,625 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 134 ಮಹಿಳಾ ಅಭ್ಯರ್ಥಿಗಳು ಮತ್ತು 1,491 ಪುರುಷ ಅಭ್ಯರ್ಥಿಗಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಒಟ್ಟು ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಪೈಕಿ ಏ.19ರ ಮೊದಲ ಹಂತದಲ್ಲೇ ಅತಿ ಹೆಚ್ಚು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ತಮಿಳುನಾಡಿನ ಎಲ್ಲ 39 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆ ಕಾರಣಕ್ಕಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಡಿಎಂಕೆ, ಎಐಎಡಿಎಂಕೆ ಪಕ್ಷಗಳು ಮತದಾರರನ್ನು ಸೆಳೆಯಲು ಭಾರೀ ಕಸರತ್ತು ನಡೆಸಿವೆ. ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಹೆಚ್ಚು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

RELATED ARTICLES

Related Articles

TRENDING ARTICLES