Wednesday, May 1, 2024

ಏ. 23, 24 ರಂದು ರಾಜ್ಯದಲ್ಲಿ ಅಮಿತ್ ಶಾ ಪ್ರಚಾರ

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು ಅವರು ಸರಣಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಏಪ್ರಿಲ್ 23 ರಂದು ಅಮಿತ್ ಶಾ ಅವರು ಬೆಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ. ಮರುದಿನ ಚಿಕ್ಕಮಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 23 ರಂದು ಯಶವಂತಪುರದಲ್ಲಿ ರೋಡ್ ಶೋ, ನಂತರ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ.

ಇದನ್ನೂ ಓದಿ: ಏ. 20 ರಂದು ರಾಜ್ಯಕ್ಕೆ ಮತ್ತೆ ಮೋದಿ ಆಗಮನ

ಏಪ್ರಿಲ್ 24 ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವರು ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES