Wednesday, May 1, 2024

ಇಂದು ಮತ್ತು ನಾಳೆ CET ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ, ಎರಡನೇ ದಿನ ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಎಪ್ರಿಲ್ 20ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷೆಗೆ ಬೆಂಗಳೂರಿನಲ್ಲಿಯೇ 167 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. 737 ವೀಕ್ಷಕರು, 737 ವಿಶೇಷ ಜಾಗೃತ ದಳದ ಸದಸ್ಯರು 737 ಪ್ರಶ್ನೆಪತ್ರಿಕಾ ಪಾಲಕರು, 14568 ಕೊಠಡಿ ಮೇಲ್ವಿಚಾರಕರು 20300 ಅಧಿಕಾರಿ ವರ್ಗದವರ ನಿಯೋಜನೆ ಮಾಡಲಾಗಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಬಿಜೆಪಿ 150 ಸ್ಥಾನ ಗೆಲ್ಲಲಿದೆ : ರಾಹುಲ್ ಗಾಂಧಿ ಭವಿಷ್ಯ

ಸದ್ಯ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿರೊದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ತಲೆ ಬಿಸಿಯಾಗಿದೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೊಂದಣಿ ಮಾಡಿರಲಿಲ್ಲ. ಆದರೆ, ಈ ವರ್ಷ ದಾಖಲೆಯ ಸಂಖ್ಯೆಯಲ್ಲಿ ನೊಂದಣಿಯಾಗಿದೆ. ಹೀಗಾಗಿ ಕೆಲವು ವಿದ್ಯಾರ್ಥಿಗಳಿಗೆ ಸಮಸ್ಯೆಗಳು ಕೂಡಾ ಎದುರಾಗಿವೆ.

ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ‌ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಕ್ರಮಕ್ಕೆ ಇಲಾಖೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಉಪಕರಣ ಟ್ಯಾಬ್ಲೆಟ್ ಮೊಬೈಲ್ ಕ್ಯಾಲುಕುಲೇಟರ್, ಬ್ಲೂಟೂಥ್ ಕೈಗಾಡಿಯಾರ ಅವಕಾಶ ಇಲ್ಲ ಅಂತಾ ಸ್ಪಷ್ಟನೆ ನೀಡಿದೆ.

RELATED ARTICLES

Related Articles

TRENDING ARTICLES