Wednesday, May 1, 2024

ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಕೇಂದ್ರ ಬಿಜೆಪಿ ನಾಯಕರು ಟಿಕಾಣಿ!

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ದಿನೇ ದಿನೇ ಕಾವೇರುತ್ತಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಏಪ್ರಿಲ್​ 24 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಕೇಂದ್ರದಿಂದ ಸಾಲು ಸಾಲಾಗಿ ಸ್ಟಾರ್​ ಪ್ರಚಾರಕರು ಆಗಮಿಸಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿ ಮೈಸೂರು ಮತ್ತು ಮಂಗಳೂರು ಕ್ಷೇತ್ರಗಳಲ್ಲಿ ಪ್ರಚಾರ ಮತ್ತು ರೋಡ್​ ಶೋಗಳಲ್ಲಿ ಭಾಗವಹಿಸಿದ್ದಾರೆ. ಇದೀಗ ಏ.19 ರಂದು ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಏ. 23, 24 ರಂದು ರಾಜ್ಯದಲ್ಲಿ ಅಮಿತ್ ಶಾ ಪ್ರಚಾರ

ಇದರ ಬೆನ್ನಲ್ಲೇ ಏಪ್ರಿಲ್​ 23, 24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು ಸರಣಿ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಏ. 20 ರಂದು ರಾಜ್ಯಕ್ಕೆ ಮತ್ತೆ ಮೋದಿ ಆಗಮನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 24 ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ಹಾಗೂ ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 21 ರಂದು ರಾಜ್ಯಕ್ಕೆ ಪ್ರಯಾಣಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

RELATED ARTICLES

Related Articles

TRENDING ARTICLES