Wednesday, May 1, 2024

ಮಂಡ್ಯ ಕೈ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ದರ್ಶನ್​ ಪ್ರಚಾರ: ತಪ್ಪೇನಿಲ್ಲ ಎಂದ ಕುಮಾರಸ್ವಾಮಿ

ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಮಂಡ್ಯ ಲೋಕಸಭ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಪ್ರಚಾರ ನಡೆಸುತ್ತಿರುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು.

ಮಂಡ್ಯ ಕ್ಷೇತ್ರದದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಸ್ಟಾರ್ ಚಂದ್ರು ಪರ ದರ್ಶನ್​ ಪ್ರಚಾರಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂತದ್ದೇನು ಇಲ್ಲ ಮಂಡ್ಯದಲ್ಲಿ ಜೆಡಿಎಸ್​ ಬಿಜೆಪಿ ಒಟ್ಟಾಗಿ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಪ್ರಚಾರ!

ಶಿವಮೊಗ್ಗ ಕ್ಷೇತ್ರದಲ್ಲಿ ಉತ್ತಮವಾಗಿ ಹೊಂದಾಣಿಕೆ ನಡೆದಿದೆ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಬೇಕು, ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ 28 ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದರು.

ಇನ್ನು ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್​ ಬಗೆಹರಿಸಲಿದೆ ಎಂದರು.

RELATED ARTICLES

Related Articles

TRENDING ARTICLES