Wednesday, May 1, 2024

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೇಸಿಗೆ ಬಿಸಿಲಲ್ಲಿ ಬೆಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ, ಶೃಂಗೇರಿ, ತೀರ್ಥಹಳ್ಳಿ, ಉತ್ತರ ಕನ್ನಡದ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಅದಾದ ಬಳಿಕ ಜನರು, ರೈತರು ಮಳೆಯನ್ನೇ ಕಾದು ಕುಳಿತಿದಿದ್ದಾರೆ. ಇದೀಗ ಹವಾಮಾನ ಇಲಾಖೆಯ ಈ ಭರವಸೆ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಇದನ್ನೂ ಓದಿ:  ಇಂದು ಮತ್ತು ನಾಳೆ CET ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​

ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES