Wednesday, May 1, 2024

ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ : ಬೈರತಿ ಸುರೇಶ್ ಅಚ್ಚರಿ ಹೇಳಿಕೆ

ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಸಿದ್ದರಾಮಯ್ಯನವರ ಆಪ್ತಿ ಹಾಗೂ ಸಚಿವ ಬೈರತಿ ಸುರೇಶ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಹೇಳಿದ್ದಾರೆ.

ನಿಮ್ಮ ಬೆಂಬಲ ಕಾಂಗ್ರೆಸ್​​ ಪಕ್ಷದ ಮೇಲಿರಲಿ. ಸಿಎಂ ಸಿದ್ದರಾಮಯ್ಯನವರ ಮೇಲಿರಲಿ. ಹಾಗೆಯೇ, ನಮ್ಮ ಅಭ್ಯರ್ಥಿ ಗೌತಮ್​ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಪುನರುಚ್ಚರಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ

ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಹೇಳಿಕೆ ನೀಡಿದ್ದರು. ಈ ಮೂಲಕ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬದಲಾಗುವ ಸುಳಿವು ನಿಡಿದ್ದರು. ಇದೀಗ ಸಿದ್ದರಾಮಯ್ಯ ಆಪ್ತ ಸಚಿವ ಬೈರತಿ ಸುರೇಶ್ ಸಹ ಇದೇ ರೀತಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES