Thursday, May 2, 2024

ಬೆಂಗಳೂರಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಬೆಂಗಳೂರು : ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಯಾಗುತ್ತಿದೆ.

ಏಪ್ರಿಲ್‌ 24ರ ಸಂಜೆ 6 ಗಂಟೆಯಿಂದ ಏಪ್ರಿಲ್‌ 26ರ ಮಧ್ಯರಾತ್ರಿವರೆಗೆ ನಗರದಲ್ಲಿ ಸೆಕ್ಷನ್‌ 144 ಜಾರಿಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಅಲ್ಲದೇ ಚುನಾವಣಾ ದಿನ ಮದ್ಯ ಮಾರಾಟವನ್ನು ಕೂಡ ನಿಷೇಧಿಸಲಾಗಿದೆ.

ಮುಕ್ತ, ನಿರ್ಭಿತ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ನಿಷೇಧಾಜ್ಞೆ ವೇಳೆ ಸಾರ್ವಜನಿಕ ಸಭೆಗಳು, ಪ್ರಚಾರ ರ‍್ಯಾಲಿಗಳು ಐದಕ್ಕಿಂತ ಹೆಚ್ಚು ಜನ ಸೇರುವುದು, ಪ್ರತಿಕೃತಿ ದಹನ, ಮಾರಕಾಸ್ತ್ರಗಳನ್ನು ಹೊಂದುವುದು, ಪ್ರಚೋದನಾತ್ಮಕ ಭಾಷಣ ಹಾಗೂ ಬಹಿರಂಗ ರಾಜಕೀಯ ಘೋಷಣೆಗಳನ್ನು ಏಪ್ರಿಲ್‌ 24 ರಿಂದ ಏಪ್ರಿಲ್‌ 26ರವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಈ ಬಗ್ಗೆ ತಿಳಿಸಿದ್ದಾರೆ. ಸೆಕ್ಷನ್‌ 144 ಜಾರಿಯಾದ ಸಮಯದಲ್ಲಿ ಮತಗಟ್ಟೆಗಳ 100 ಮೀಟರ್‌ ವ್ಯಾಪ್ತಿಯೊಳಗೆ ಪ್ರಚಾರ ಮಾಡಲು ಅಥವಾ ಬ್ಯಾನರ್‌, ಫಲಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಅನುಮೋದಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆಗಳ 100 ಮೀಟರ್‌ ವ್ಯಾಪ್ತಿಯಲ್ಲಿ ಸೆಲ್‌ಪೋನ್‌, ಕಾರ್ಡ್‌ಲೆಸ್‌ ಫೋನ್‌ ಹಾಗೂ ಇತರೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಬಳಸಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES

Related Articles

TRENDING ARTICLES