Friday, May 3, 2024

ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ : ಫಯಾಜ್ ತಂದೆ ಕಣ್ಣೀರು

ಹುಬ್ಬಳ್ಳಿ : ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ಫಯಾಜ್​ ತಂದೆ‌ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯೆ ನೀಡಿದ್ದಾರೆ. ಮೃತ ನೇಹಾ ಪೋಷಕರಿಗೆ ಕ್ಷಮೆಯಾಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಫಯಾಜ್​ಗೆ ಯಾವ ಶಿಕ್ಷೆ ಕೊಟ್ಟರೂ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ. ಮುಂದೆ ಇಂತಹ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಆ ರೀತಿಯ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ಬಾಬಾ ಸಾಹೇಬ್‌ ಸುಬಾನಿ ಕಣ್ಣೀರು ಹಾಕಿದ್ದಾರೆ.

ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾವು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ದಾರೆ.

ನಾನು ಲವ್ ಬೇಡ ಅಂತ ಹೇಳಿದ್ದೆ

ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ ಹೇಳಿದ್ದೆ. ಈ ಘಟನೆಯಿಂದ ಅವನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES