Friday, May 3, 2024

ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ : ಪರಮೇಶ್ವರ್

ಬೆಂಗಳೂರು : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ವೈಯಕ್ತಿಕ ಕಾರಣಕ್ಕೆ ನಡೆದಿದೆ ಎಂಬ ತಮ್ಮ ಹೇಳಿಕೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಷಾಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನೇಹಾ ಹತ್ಯೆ ಕುರಿತು ನನ್ನ ಹೇಳಿಕೆಯಿಂದ ನೇಹಾ ಪೋಷಕರಿಗೆ ಬೇಸರವಾಗಿದ್ದರೆ ವಿಷಾಧವಿರಲಿ ಎಂದು ಹೇಳಿದ್ದಾರೆ.

ಸತ್ಯವನ್ನು ಯಾವತ್ತೂ ಮುಚ್ಚಿಡಲು ಆಗಲ್ಲ. ತನಿಖೆ ಬಳಿಕ ಎಲ್ಲಾ ವಿಷಯ ಹೊರಬರುತ್ತದೆ. ನಮಗೆ ಬಂದಿರುವ ವರದಿ ಪ್ರಕಾರ ಮಾತನಾಡಿದ್ದೇನೆ. ಎಬಿವಿಪಿ ಸಂಘಟನೆಯಾಗಲಿ, ಮತ್ತೊಬ್ಬರಾಗಲಿ ಅವರಿಗೆ ಸತ್ಯಾಂಶ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲಾ ಸತ್ಯ ಹೊರಗೆ ಬರುತ್ತದೆ

ಎಬಿವಿಪಿ ಕಾರ್ಯಕರ್ತರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕಿದ ವಿಚಾರ ಕುರಿತು ಮಾತನಾಡಿದ ಅವರು, ಅವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ನೇಹಾ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ನಮಗೆ ಜವಾಬ್ದಾರಿ ಇದೆ. ಈ ಪ್ರಕರಣದ ಬಗ್ಗೆ ತನಿಖೆ ಆಗುತ್ತೆ ಅಲ್ವಾ..? ತನಿಖೆಯಲ್ಲಿ ಎಲ್ಲಾ ಸತ್ಯ ಹೊರಗೆ ಬರುತ್ತದೆ ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES