Wednesday, May 22, 2024

ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತ ಸಾವು

ವಿಜಯನಗರ : ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆಯ ಹೊರವಲಯದ ಶ್ರೀ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ಸಂಭವಿಸಿದೆ. ರಾಮು (53) ಮೃತ ದುರ್ದೈವಿ ಭಕ್ತ.

ರಥ ಬೀದಿಯಲ್ಲಿ ಬರುವಾಗ ರಾಮು ರಥದ ಚಕ್ರದಡಿ ಸುಲಿಕಿದ್ದಾರೆ. ಕೂಡಲೇ ಅಲ್ಲಿದ್ದ ಭಕ್ತರ ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಅಷ್ಟರಲ್ಲಾಗಲೇ ತೀವ್ರ ರಕ್ತಸ್ರಾವದಿಂದ ಚೀರಾಡಿದ್ದಾರೆ. ರಥದ ಚಕ್ರದಲ್ಲಿ ಸಿಲುಕುತ್ತಿದ್ದಂತೆ ಆಂಬ್ಯುಲೆನ್ಸ್ ಮೂಲಕ ಗಾಯಾಳುವನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ 

ದುರಾದೃಷ್ಟವಶಾತ್ ಆಸ್ಪತ್ರೆಯಲ್ಲಿ ರಾಮು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES