Thursday, May 9, 2024

ಡಿಕೆ ಶಿವಕುಮಾರ್​, ಕುಮಾರಸ್ವಾಮಿ, ವಿಜಯೇಂದ್ರ ವಿರುದ್ದ FIR ದಾಖಲು

ಬೆಂಗಳೂರು : ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ತಮ್ಮ ಸಹೋದರ ಡಿ.ಕೆ.ಸುರೇಶ್ ಅವರಿಗೆ ಮತ ನೀಡಿದರೆ ಕಾವೇರಿಯಿಂದ ನೀರು ಕೊಡಿಸುವುದಾಗಿ ಬೆಂಗಳೂರಿನ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದ್ದು ಈ ಸಂಬಂಧ ವಿಡಿಯೋ ಆಧರಿಸಿ ಕಾಂಗ್ರೆಸ್ ರಾಜ್ಯಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೊದಲು ಗೆಲ್ಲಿಸೋಣ, ಆಮೇಲೆ ನೀರು ಕೇಳೋಣ : ಹೆಚ್.ಡಿ. ದೇವೇಗೌಡ

RR ನಗರದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರನ್ನು ಉದ್ದೇಶಿಸಿ ಮಾತನಾಡುವಾಗ MCC ಉಲ್ಲಂಘನೆಗಾಗಿ DCM ಡಿ.ಕೆ. ಶಿವಕುಮಾರ್ ವಿರುದ್ಧ ಬೆಂಗಳೂರಿನ FSTಯಿಂದ FIR ದಾಖಲಿಸಲಾಗಿದೆ. ಎಪ್ರಿಲ್ 19ರಂದು ಬಿಜೆಪಿ ಕರ್ನಾಟಕದ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಅವಹೇಳನಕಾರಿ ಪೋಸ್ಟ್‌ಗಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನ FST FIR ದಾಖಲಿಸಿದೆ.

ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತುಮಕೂರು ಗುಬ್ಬಿ ಎಫ್‌ಎಸ್‌ಟಿಯಿಂದ ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು,

ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

RELATED ARTICLES

Related Articles

TRENDING ARTICLES