Tuesday, May 7, 2024

IPL 2024 : ಇಂದು ಈಡನ್ ​ಗಾರ್ಡನ್ಸ್​ನಲ್ಲಿ RCB vs KKR ಮುಖಾಮುಖಿ

IPL 2024 : ಐಪಿಎಲ್​ 2024ನೇ ಸೀಸನ್​ನಲ್ಲಿ ಇಂದು 36ನೇ ಪಂದ್ಯ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆಯಲಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಜೆ 3.30 ರಿಂದ ಪಂದ್ಯ ಆರಂಬವಾಗಲಿದೆ. ಆರ್​ಸಿಬಿ ಪಾಲಿಗೆ 8ನೇ ಪಂದ್ಯ. ಈ ಪದ್ಯದಲ್ಲಿ ಆರ್​ಸಿಬಿ ಗೆಲ್ಲಲ್ಲು ಬೇಕಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಇದನ್ನೂ ಓದಿ: ಮಗಳಿಗೆ ರಕ್ಷಣೆ ಕೊಟ್ಟಿದ್ದಕ್ಕೆ ತಂದೆಯ ಕಾಲು ಮುರಿದ ಪಾಗಲ್​ ಪ್ರೇಮಿ ಅಂಡ್​ ಗ್ಯಾಂಗ್​

ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ ಉಭಯ ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಕೆಕೆಆರ್​ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿಯನ್ನು ಎದುರು ನೋಡಬಹುದು.

ಪ್ರಸ್ತುತ ಅಂಕಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 3ನೇ ಸ್ಥಾನದಲ್ಲಿದ್ದರೆ, ಆರ್​ಸಿಬಿ ತಂಡ 10ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯಗಳ ಫಲಿತಾಂಶಗಳ ಬಳಿಕ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

RELATED ARTICLES

Related Articles

TRENDING ARTICLES